March 16, 2026
WhatsApp Image 2025-07-13 at 9.51.16 AM

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಸಾಕ್ಷಿ ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ, ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರೆ ಹೆಚ್ಚಿನ ಮಾಹಿತಿಗಳನ್ನು ಒಳಗೊಂಡಿರುವ ಕಾಲ್ಪನಿಕವಾಗಿ (AI) ಸೃಷ್ಟಿಸಲಾದ, ಸುಳ್ಳು ಮಾಹಿತಿಗಳನ್ನೊಳಗೊಂಡ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ ನಲ್ಲಿ ಪ್ರಸಾರ ಮಾಡಿ, ಉದ್ದೇಶಪೂರ್ವಕವಾಗಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನೆಲೆಯಲ್ಲಿ ಸಮೀರ್ ಎಂ.ಡಿ ಎಂಬ ಯೂಟ್ಯೂಬರ್ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿಅ.ಕ್ರ : 42/2025 ಕಲಂ: 192, 240, 353(1)(b) bNS ರಂತೆ ಪ್ರಕರಣ ದಾಖಲಿಸಿರುವುದಾಗಿ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.