ಕಾರ್ಕಳ: ಅಂಗಡಿಯೊಂದರಲ್ಲಿ ನಿಯಮ ಉಲ್ಲಂಘಿಸಿ ದಾಸ್ತಾನು ಇರಿಸಿದ್ದ ಸಾವಿರಾರು ರೂ. ಮೌಲ್ಯದ ಸ್ಫೋಟಕ ವಸ್ತುಗಳನ್ನು ಕಾರ್ಕಳ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿರುವ ಘಟನೆ ಸಚ್ಚರಿಪೇಟೆ ನಡೆದಿದೆ.
ಪರವಾನಿಗೆ ಪಡೆದುಕೊಂಡು ಕೆಮಿಕಲ್ ಕಡಿಮೆ ಇರುವ ಹಸಿರು ಪಟಾಕಿಗಳನ್ನು ದಾಸ್ತಾನು ಮಾಡಬೇಕು ಮತ್ತು ಅದಕ್ಕೆ ಪ್ರತ್ಯೇಕವಾದ ಗೋಡಾನ್ ಮಾಡಿ 7 ಅಡಿ ಎತ್ತರದ ಕಂಪೌಂಡನ್ನು ಗೋಡಾನಿನ ಸುತ್ತಲೂ ನಿರ್ಮಿಸಬೇಕು. ಅಲ್ಲದೆ ಗೋಡಾನಿನ ಸುತ್ತಲೂ 100 ಮೀಟರ್ ದೂರದಲ್ಲಿ ಯಾವುದೇ ವಾಸದ ಮನೆಗಳು ಇರದಂತೆ ನಿಯಮಗಳಿವೆ.
ಆದರೆ ಈ ನಿಯಮ ಉಲ್ಲಂಘಿಸಿ ಜನರಲ್ ಸ್ಟೋರ್ಸ್‌ನಲ್ಲಿ ಸ್ಫೋಟಕ ವಸ್ತುಗಳನ್ನು ದಾಸ್ತಾನು ಇರಿಸಿದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದ ಪೊಲೀಸರು ದಾಳಿ ನಡೆಸಿ ಸುಮಾರು 41370ರೂ. ಮೌಲ್ಯದ 38 ಕೆ.ಜಿ. ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.