ಉಡುಪಿ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಫೆ.13ರಿಂದ 15ರವರೆಗೆ ನಡೆಯಲಿದ್ದು, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗುಂಜೆ ಮತ್ತು ಶಿರೂರು ಗ್ರಾಮ ವ್ಯಾಪ್ತಿಯ ಎಲ್ಲ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ಗಳಲ್ಲಿ ಮದ್ಯ ಮಾರಾಟವನ್ನು ಫೆ.13 ಸಂಜೆ 6ರಿಂದ ಫೆ.15 ರಾತ್ರಿ 12ರವರೆಗೆ ಮುಚ್ಚಲು ಆದೇಶಿಸಲಾಗಿದೆ. ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಡ್ರೈ ಡೇ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಆದೇಶಿಸಿದ್ದಾರೆ.