ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ.
ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ. ಮಾಹಿತಿ ತಿಳಿದು ಪುತ್ತೂರು ವಿಶ್ವಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಹಿಂದು ಸಂಘಟಕರು ಸ್ಥಳಕ್ಕೆ ಆಗಮಿಸಿದ್ದಾರೆ. ವಿಷಯ ತಿಳಿದು ಪೊಲೀಸರು ಬಂದು ಲಿಂಗವನ್ನು ಠಾಣೆಗೆ ಕೊಂಡೊಯ್ದಿದ್ದಾರೆ.