March 4, 2026
WhatsApp Image 2026-01-15 at 2.36.18 PM
ಬೆಳ್ತಂಗಡಿ : ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15) ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವಾಗಿರುತ್ತದೆ ಎಂದು ತಿಳಿಸಿದೆ. ಪ್ರಾಥಮಿಕ ವರದಿ ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯ ಉಂಟಾಗಿವೆ ಮತ್ತು ಯಾವುದೇ ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದುಬಂದಿರುತ್ತದೆ. ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್‌ಪಿ ಅವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿತ್ತು. ಇದೀಗ ಸುಮಂತ್ ಶವ ಮೃತದೇಹ ಪತ್ತೆಯಾದ ಕೆರೆಯ ನೀರನ್ನು ಖಾಲಿ ಮಾಡಿ ಪರಿಶೀಲನೆ ನಡೆಸಿದಾಗ ಕತ್ತಿ ಮತ್ತು ಟಾರ್ಚ್ ಲೈಟ್ ದೊರೆತಿದೆ ಎಂದು ಮಾಹಿತಿ ಲಭ್ಯವಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.