ಪುತ್ತೂರಿನ ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ ಫೆ.14 ರಂದು ರಾತ್ರಿ ನಡೆದಿದೆ.
ಕಾರಲ್ಲಿದ್ದವರನ್ನು ಬೆಟ್ಟಂಪಾಡಿಯ ದಿಲೀಪ್ ಕುಮಾರ್ ರಾವ್ , ಶಶಿಕುಮಾರ್ , ನವನೀತ್ ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮುರಳಿಧರ್ ಭಟ್ ಎಂದು ಸ್ಥಳೀಯರು ಗುರುತಿಸಿದ್ದಾರೆ.
KA21 P 5049 ನೋಂದಾಣಿಯ ಫಾರ್ಡ್ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುತ್ತಿದ್ದ ವೇಳೆ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಅಪಘಾತ ಸಂಭವಿಸಿದ್ದು , ಕಾರು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದಿದೆ.
ಕೂಡಲೇ ಸ್ಥಳೀಯರು ಗಾಯಳು ಗಳನ್ನು ಆಸ್ಪತ್ರೆಗೆ ಸಾಗಿಸಿದ್ದರೆ. ಅಪಘಾತದಲ್ಲಿ ನಿಡ್ಪಳ್ಳಿ ಗ್ರಾಮ ಪಂಚಾಯತ್ ಮುರಳಿಧರ್ ಭಟ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತ ಸಂಭವಿಸಿದ ಕೂಡಲೇ ಓರ್ವ ಘಟನೆ ನಡೆದ ಸ್ಥಳದಿಂದ ತನ್ನ ಮನೆಗೆ ಹೋಗಿದ್ದಾನೆ ಎಂದು ತಿಳಿದುಬಂದಿದೆ.