ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.

ಬಿಹಾರ ಮೂಲದ ಪ್ರಸ್ತುತ ಮೇರಮಜಲು ಬಾಡಿಗೆ ಮನೆ ನಿವಾಸಿ ಬಬ್ಲು (36) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ.

ಹೊರವಲಯದ ಮೇರಮಜಲು ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಯೊಂದರ ಒಂದನೇ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.