October 27, 2024
WhatsApp Image 2024-04-15 at 5.27.19 PM

ಬೆಳ್ತಂಗಡಿ: ಉಜಿರೆಯ ಖಾಸಗಿ ಶಾಲೆಯೊಂದರ ಆರನೇ ತರಗತಿಯ ವಿದ್ಯಾರ್ಥಿನಿಗೆ ಶಿಕ್ಷಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ. ಆರೋಪಿಯನ್ನು ಶಿಕ್ಷಕ ವಿರಾಜ್ ಜೈನ್ ಎಂದು ಗುರುತಿಸಲಾಗಿದೆ. ಬಾಲಕಿ ಶಾಲೆಗೆ ಹೋಗುವುದಿಲ್ಲ ಎಂದು ಮನೆಯಲ್ಲಿ ಹೇಳಿದ ಹಿನ್ನೆಲೆಯಲ್ಲಿ ಮನೆಯವರು ವಿಚಾರಿಸಿದಾಗ ಶಿಕ್ಷಕ ವಿರಾಜ್ ಜೈನ್ ಕೆಲವು ತಿಂಗಳಿನಿಂದ ಅಶ್ಲೀಲವಾಗಿ ವರ್ತಿಸುತ್ತಾ ಅಶ್ಲೀಲ ವೀಡಿಯೊಗಳನ್ನು ತೋರಿಸಿತ್ತಾ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ಇದರಿಂದಾಗಿ ತಾನು ಶಾಲೆಗೆ ಹೋಗುವುದಿಲ್ಲ ಎಂದು ಹೇಳಿದ್ದಾಳೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮನೆಯವರು ಬಾಲಕಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಶಿಕ್ಷಕನ ವಿರುದ್ಧ ದೂರು ನೀಡಿದ್ದಾರೆ. ಇದೀಗ ಬೆಳ್ತಂಗಡಿ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.