July 3, 2025 11:33:24 AM
WhatsApp Image 2023-02-16 at 2.45.44 PM

ಉಡುಪಿ: ಬಸ್​ ನಿಲ್ದಾಣದ ಪಕ್ಕದಲ್ಲಿ ಮೂವರು ತೃತೀಯ ಲಿಂಗಿಯರು ಸೇರಿ ಹೊಟೇಲ್​ ಪ್ರಾರಂಭಿಸುವ ಮೂಲಕ ದುಡಿಮೆಗೆ ಇಳಿದಿದ್ದು ಮಾದರಿ ಕೆಲಸ‌ ಮಾಡಿದ್ದಾರೆ.

ಪೂರ್ವಿ, ವೈಷ್ಣವಿ ಮತ್ತು ಚಂದನಾ ಎಂಬ ಹೆಸರಿನ ಮೂವರು ತೃತೀಯ ಲಿಂಗಿಗಳು ಉಡುಪಿ ಬಸ್​ ನಿಲ್ದಾಣದ ಪಕ್ಕದಲ್ಲಿ ಹೊಸದಾಗಿ ಹೋಟೆಲ್​ ತೆರೆದಿದ್ದಾರೆ.

ಈ ಹೋಟೆಲ್ ರಾತ್ರಿ ಮಾತ್ರ ತೆರೆದಿರುತ್ತದೆ.ರಾತ್ರಿ ಪಾಳಯದಲ್ಲಿ ಕೆಲಸ ಮಾಡುವವರಿಗೆ, ರಾತ್ರಿ ಆಹಾರ ಸಿಗದೆ ಪರದಾಡುತ್ತಿರುತ್ತಾರೆ.ಹೀಗಾಗಿ ಇವರಿಗೆ ಅನುಕೂಲವಾಗಲೆಂದು ಮಧ್ಯರಾತ್ರಿ 1 ಗಂಟೆಯಿಂದ ಬೆಳಿಗ್ಗೆ 7ಗಂಟೆಯವರೆಗೆ ಹೋಟೆಲ್​ ತೆರಯಲಾಗುತ್ತದೆ. ಇದು ದೂರದ ಊರಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ರಾತ್ರಿ ಸಮಯದಲ್ಲಿ ಉಡುಪಿಯಲ್ಲಿ ಎಲ್ಲ ಹೋಟೆಲ್​ಗಳು ಬಂದಾಗಿರುತ್ತವೆ.ಈ ಸಮಯದಲ್ಲಿ ರಾತ್ರಿ ಪ್ರಯಾಣಿಕರಿಗೆ ಮತ್ತು ರಾತ್ರಿ ಪಾಳಯದಲ್ಲಿ ಕೆಲಸ ಮಾಡುವ ಜನರಿಗೆ ಆಹಾರ ಸಿಗುವುದಿಲ್ಲ. ಹೀಗಾಗಿ ಮೂವರು ತೃತೀಯ ಲಿಂಗಿಗಳು ಪ್ರಾರಂಭಿಸಿದ ಈ ಹೋಟೆಲ್​ ಜನರಿಗೆ ತುಂಬಾ ಅನುಕೂಲಕರವಾಗಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>