ದಕ್ಷಿಣ ಕನ್ನಡ: ಉಚಿತ ‘ಮೊಬೈಲ್ ಪೋನ್ ರಿಪೇರಿ ತರಬೇತಿ’ಗೆ ಅರ್ಜಿ ಆಹ್ವಾನ

 ದಕ್ಷಿಣ ಕನ್ನಡ: ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತ ಮೊಬೈಲ್ ಪೋನ್ ರಿಪೇರಿ ತರಬೇತಿಗೆ ಅರ್ಜಿಯನ್ನು ರುಡ್ ಸೆಟ್ ಸಂಸ್ಥೆಯಿಂದ ಕರೆಯಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಉಜಿರೆಯ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದಂತ ಸುರೇಶ್.ಎಂ ಅವರು, ಧರ್ಮಸ್ಥಳದ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗಾಗಿ ವಿವಿಧ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ದಿನಾಂಕ 04-04-2024 ರಿಂದ 03-05-2024ರವರೆಗೆ ಒಂದು ತಿಂಗಳವರೆಗೆ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತವಾಗಿ ಮೊಬೈರ್ ಪೋನ್ ರಿಪೇರಿ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.

ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು 18-45 ವರ್ಷದ ಒಳಗೆ ಇರುವವರು ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಉಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಜೊತೆಗೆ ಸಂಸ್ಥೆಯಿಂದ ಸಮವಸ್ತ್ರವನ್ನು ಉಚಿತವಾಗಿ ನೀಡಲಾಗುತ್ತದೆ. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ಕೂಡ ನೀಡಲಾಗುತ್ತದೆ ಎಂದಿದ್ದಾರೆ.

ವಾಟ್ಸಾಪ್ ಮೂಲಕವೂ ಈ ತರಬೇತಿಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಅದರ ಸಂಖ್ಯೆ 6364561982 ಆಗಿರುತ್ತದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋದಾದರೇwww.rudsetitraining.orgಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08256236404, 9591044014, 9448348569, 9448484237, 9980885900ಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

Check Also

ಮಂಗಳೂರು: ಮತಗಟ್ಟೆಗಳಲ್ಲಿ ವರ್ಣ ಚಿತ್ತಾರ

ಎಲ್ಲೆಡೆ ಚುನಾವಣೆ ಕಾವು ಹೆಚ್ಚಾಗುತ್ತಾ ಇದೆ. ಇತ್ತ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಮಂಗಳೂರು ತಾಲೂಕು …

Leave a Reply

Your email address will not be published. Required fields are marked *

You cannot copy content of this page.