March 12, 2026
WhatsApp Image 2024-04-16 at 3.14.31 PM

ಮಂಗಳೂರು : 6ನೇ ತರಗತಿ ವಿದ್ಯಾರ್ಥಿ ನಿಗೆ ಶಿಕ್ಷಕನೊಬ್ಬ ಕಳೆದ ಒಂದು ವರ್ಷದಿಂದ ಲೈಂಗಿಕ ಕಿರುಕುಳ ನೀಡುತ್ತಿರುವ ಹಿನೆಲೆಯಲ್ಲಿ ಇದೀಗ ಬೆಳ್ತಂಗಡಿ ತಾಲೂಕಿನ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಶಿಕ್ಷಕ ವಿರಾಜ್​ ಜೈನ್​ ಕಳೆದ ಜೂನ್ ನಿಂದ ದೂರು ನೀಡುವ ದಿನದವರೆಗೂ ಕೂಡ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಮಾರ್ಚ್​ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ ಮುಂದೆ ಹೇಳಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದ್ದಾರೆ.ಆಗ ವಿದ್ಯಾರ್ಥಿನಿ ಶಾಲೆಯ ಶಿಕ್ಷಕನಾದ ವಿರಾಜ್​ ಜೈನ್​ ಕಳೆದ ವರ್ಷ ಜೂನ್​​ನಿಂದ ದೂರು ದಾಖಲಾಗುವ ದಿನದವರೆಗೆ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ. ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.