
ಬೆಳ್ತಂಗಡಿ:ನಾಯಿಯೊಂದು ಏಕಾಏಕಿ ರಸ್ತೆಗೆ ಅಡ್ಡಬಂದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಸಾವನಪ್ಪಿದ ಘಟನೆ ಅಳದಂಗಡಿಯಲ್ಲಿ ನಡೆದಿದೆ.
ಮೃತರನ್ನು ನಾವರ ಗ್ರಾಮದ ಹಾರಡ್ಡೆ ನಿವಾಸಿ ದೇವಪ್ಪ @ ಸುಧಾಕರ (37) ಎಂದು ಗುರುತಿಸಲಾಗಿದೆ. ಅಳದಂಗಡಿ ಸತ್ಯದೇವತೆ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಗುರುವಾಯನಕೆರೆ ಕಡೆಯಿಂದ ಅಳದಂಗಡಿ ಕಡೆ ಬಾಡಿಗೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ, ರಸ್ತೆ ಮೇಲೆ ಏಕಾಏಕಿ ನಾಯಿ ಅಡ್ಡಬಂದ ಹಿನ್ನೆಲೆಯಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡು ಆಟೋ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಚಾಲಕ ದೇವಪ್ಪ ಅಲಿಯಾಸ್ ಸುಧಾಕರ್ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ. ವೇಣೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
