May 29, 2025 4:12:10 AM
rttt

ಮಂಗಳೂರು: ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಅವರನ್ನು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಇನ್ನು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣ ಅಧಿಕಾರಿಯಾಗಿದ್ದ ಡಾ.ಕುಮಾರ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.

ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿ ಕಂಪ್ಯೂಟರ್ ವಿಷಯದಲ್ಲಿ ಪದವಿ ಪಡೆದಿದ್ದಾರೆ.1986 ರಲ್ಲಿ ಜನಿಸಿದ ಅವರು 2013ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದಾರೆ.

ರವಿಕುಮಾರ್ ಅವರನ್ನು ಯಾವ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

About The Author

Leave a Reply

Your email address will not be published. Required fields are marked *

<p>You cannot copy content of this page.</p>