ಸುರತ್ಕಲ್: ಕ್ರಿಕೆಟ್ ಬೆಟ್ಟಿಂಗ್ ಆರೋಪ- ಇಬ್ಬರ ಬಂಧನ

ಸುರತ್ಕಲ್: ವಾಟ್ಸ್ ಆ್ಯಪ್ ಗ್ರೂಪ್‌ ಗಳಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ ಸುರತ್ಕಲ್ ಕಟ್ಲ ನಿವಾಸಿ ಮೂಢಾ ಮಾರುಕಟ್ಟೆಯಲ್ಲಿ ತೆಂಗಿನಕಾಯಿ ವ್ಯಾಪಾರ ಮಾಡುತ್ತಿದ್ದ ಪ್ರವೀಣ್ ಮತ್ತು ಚೊಕ್ಕಬೆಟ್ಟು ಕ್ರಾಸ್ ವಿಶಾಲ್ ಮಾರ್ಟ್ ಬಳಿಯ ನಿವಾಸಿ ಮೂಢಾ ಮಾರುಕಟ್ಟೆಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುವ ಮುನವ್ವರ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಪ್ರವೀಣ್ ವಾಟ್ಸ್‌ ಆ್ಯಪ್ ಗ್ರೂಪ್‌ಗಳನ್ನು ಮಾಡಿಕೊಂಡು ಅದರಲ್ಲಿ ಕ್ರಿಕೆಟ್ ಬೆಟ್ಟಿಂಗ್‌ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿ ಪ್ರವೀಣ್, ಆತನ ತೆಂಗಿನಕಾಯಿ ಮಾರಾಟದ ಮಳಿಗೆಯಲ್ಲಿದ್ದ ವೇಳೆ ದಾಳಿ ಮಾಡಿ ವಶಕ್ಕೆ ಪಡೆದರೆ, ಮತ್ತೋರ್ವ ಆರೋಪಿ ಮುನವ್ವರ್ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರ ವಿರುದ್ಧ ಸುರತ್ಕಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ .

Check Also

ಮೆದುಳು ತಿನ್ನೋ ಅಮೀಬಾ ಸೋಂಕಿಗೆ 14 ವರ್ಷದ ಬಾಲಕ ಮೃತ್ಯು; 3ನೇ ಪ್ರಕರಣ

ಕೋಝೀಕೋಡ್(ಕೇರಳ): ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ ಕೊನೆಯುಸಿರೆಳೆದಿರುವುದಾಗಿ …

Leave a Reply

Your email address will not be published. Required fields are marked *

You cannot copy content of this page.