ಪುತ್ತೂರು: ಚೂರಿ ಇರಿದು ಯುವತಿಯ ಹತ್ಯೆ ಪ್ರಕರಣ; ಓರ್ವ ಪೊಲೀಸ್‌ ವಶಕ್ಕೆ..!!

ಪುತ್ತೂರು: ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದ್ದು , ಯುವತಿ ಮೃತಪಟ್ಟಿದ್ದಳು.

ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದಿದ್ದು , ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಜಯಶ್ರೀ ಈ ಮೊದಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲ ಸಮಯದಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದಳು ಎಂದು ತಿಳಿದು ಬಂದಿದೆ.ಯಾವ ಕಾರಣಕ್ಕೆ ಕೊಲೆ ನಡೆದಿದೆ ಎಂಬುದು ತನಿಖೆಯ ನಂತರ ತಿಳಿಯಬೇಕಿದೆ.

 

Check Also

ಕುಂದಾಪುರ : ಸಮುದ್ರ ಪಾಲಾಗಿದ್ದ ಯುವಕನ ಮೃತದೇಹ ವಾರದ ಬಳಿಕ ಪತ್ತೆ

ಕುಂದಾಪುರ : ಕಳೆದ ಬುಧವಾರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಸಮುದ್ರ ತೀರದಲ್ಲಿ ಮುಳುಗಿ ನಾಪತ್ತೆಯಾಗಿದ್ದ ತುಮಕೂರು ಮೂಲದ …

Leave a Reply

Your email address will not be published. Required fields are marked *

You cannot copy content of this page.