ಪುತ್ತೂರು: ತಾಲೂಕಿನ ಮುಂಡೂರು ಗ್ರಾಮದ ಕಂಪ ನಿವಾಸಿ ಗಿರಿಜಾ ಎಂಬವರ ಪುತ್ರಿ ಜಯಶ್ರೀ(23) ಎಂಬಾಕೆಯ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ಯುವತಿಯ ಹಳೆಯ ಪ್ರಿಯತಮನ ವಿರುದ್ಧ ಪುತ್ತೂರು ಠಾಣೆಗೆ ದೂರು ನೀಡಲಾಗಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಉಮೇಶ್ ಎಂಬಾತ ಹತ್ಯೆ ನಡೆಸಿರುವ ಸಾಧ್ಯತೆ ಇದ್ದು, ಈ ಕುರಿತು ಠಾಣೆಗೆ ದೂರು ನೀಡಿದ್ದಾರೆ.
ಜಯಶ್ರೀಯನ್ನು ಕನಕಮಜಲಿನ ಉಮೇಶ ಎಂಬವನು ಕೆಲವು ಸಮಯದಿಂದ ಪ್ರೀತಿಸುತ್ತಿದ್ದ. ಆತನು ಆಗಾಗೆ ಗಿರಿಜಾರವರ ಮನೆಗೂ ಬರುತ್ತಿದ್ದ. ಆದರೆ ಇತ್ತೀಚೆಗೆ ಅವನ ಗುಣ ನಡತೆ ಜಯಶ್ರೀಗೆ ಇಷ್ಟವಾಗದ ಕಾರಣ 2022ನೇ ನವೆಂಬರ್ ವೇಳೆಗೆ ಜಯಶ್ರೀಯು ಉಮೇಶನನ್ನು ದೂರ ಮಾಡಿದ್ದರು. ಈ ವಿಷಯದಲ್ಲಿ ಉಮೇಶ ಅಸಮಾಧಾನದಲ್ಲಿದ್ದ ಎನ್ನಲಾಗಿದೆ.
ಇದೇ ದ್ವೇಷದಿಂದ ಆತ ಕೃತ್ಯ ನಡೆಸಿರಬಹುದೆಂದು ಅಂದಾಜಿಸಲಾಗಿದೆ. ಯುವತಿಯ ಮನೆ ಹಾಗೂ ಯುವತಿಯ ಬಗ್ಗೆ ಆತನಿಗೆ ಮಾತ್ರ ಸಂಪೂರ್ಣ ಮಾಹಿತಿ ಇತ್ತು ಎನ್ನಲಾಗಿದೆ. ಈ ಕಾರಣಕ್ಕಾಗಿ ಸಂದರ್ಭವನ್ನು ಬಳಸಿಕೊಂಡು ಮನೆಗೆ ಬಂದು ಚಾಕುವಿನಿಂದ ಇರಿದು ಹತ್ಯೆ ನಡೆಸಿರಬಹುದೆಂದು ಮೃತಳ ತಾಯಿ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.