

ಬ್ರಹ್ಮಾವರ : ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾವನ್ನಪ್ಪಿರುವ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನದಲ್ಲಿ ನಡೆದಿದೆ. ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಮೃತಪಟ್ಟವರು. ಯಶೋಧಾ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿ.
ಹಿರಿಯ ನಾಗರಿಕರ ಕಾರ್ಯಕ್ರಮದಡಿ ಮನೆಯಿಂದಲೇ ಮತದಾನ ಕಾರ್ಯಕ್ರಮ ನಡೆಯುತ್ತಿದೆ. ಯಶೋಧಾ ಅವರಿಗೆ ಮತದಾನದ ದಿನ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ, ಅವರು ಮತದಾನ ಮಾಡಿ ಆಸ್ಪತ್ರೆ ತೆರಳಲು ನಿಶ್ಚಯಿಸಿದ್ದರು. ಮತದಾನದ ಬಳಿಕ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಯಶೋಧಮ್ಮ ಮೃತಪಟ್ಟಿದ್ದಾರೆ. ಅವರು, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.