March 21, 2026
WhatsApp Image 2024-05-17 at 5.51.40 PM

ಹೆಬ್ರಿ: ಕೆ ಎಸ್ ಆರ್ ಟಿ ಸಿ ಬಸ್ ಸಿಬ್ಬಂದಿ ಮೇಲೆ ಪ್ರವಾಸಿಗರು ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಸಂಭವಿಸಿದೆ. ಆಗುಂಬೆಯಿಂದ ಹೆಬ್ರಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ನ ಹಿಂದೆ ಪ್ರವಾಸಿಗರ ಕಾರಿತ್ತು.ಈ ವೇಳೆ ಪ್ರವಾಸಿಗರ ಕಾರಿಗೆ ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಕಾರಿನಲ್ಲಿದ್ದ ಪ್ರವಾಸಿಗರು ,ಘಾಟಿಯ ಮಧ್ಯೆ ಬಸ್ ನಿಲ್ಲಿಸಿ ನಿರ್ವಾಹಕ ಮತ್ತು ಚಾಲಕನಿಗೆ ಹಲ್ಲೆ ಮಾಡಿದ್ದಾರೆ. ಈ ಗಲಾಟೆಯಿಂದಾಗಿ ಘಾಟಿಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಆಗಿದೆ.ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.