ಉಪ್ಪಿನಂಗಡಿ ಸಮೀಪದ ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಹಾಸ್ ಎಂಬಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಇಲ್ಲಿನ ನಿವಾಸಿ ಹೇಮಾವತಿ (37) ಮೃತ ಮಹಿಳೆ. ಈಕೆ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.