March 20, 2026
WhatsApp Image 2025-12-17 at 9.45.36 AM

ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮಂಜೇಶ್ವರ ತಾಲೂಕು ಉಪ್ಪಳದ ಅಬ್ದುಲ್ ರವೂಫ್ ಅಲಿಯಾಸ್ ಮೀಸೆ ರವೂಫ್ (48) ಬಂಧಿತ ಆರೋಪಿ. ಈತನ ವಿರುದ್ಧ ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸುಮಾರು 19 ಪ್ರಕರಣಗಳು ದಾಖಲಾಗಿವೆ.

ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ ಕೋಣಾಜೆ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು ಸೇರಿ ಒಟ್ಟು 25 ಪ್ರಕರಣಗಳು ದಾಖಲಾಗಿದ್ದು, ಕಾವೂರು ಠಾಣಾ ಪ್ರಕರಣದಲ್ಲಿ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು. ಕೋಣಾಜೆ ಠಾಣಾ 5 ಪ್ರಕರಣಗಳಲ್ಲಿ ಉದ್ಘೋಷಿತ ಅಪರಾಧಿ ಎಂದು ನ್ಯಾಯಾಲಯವು ಘೋಷಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.