ಮಂಗಳೂರು: ಬಾಡಿಗೆ ಮನೆಯಿಂದ ನಗದು- ಬೆಳ್ಳಿ ಸೊತ್ತು ಕಳವು

ಮಂಗಳೂರು:ಮಂಗಳೂರು ನಗರದ ಕದ್ರಿ ಜಾರ್ಜ್ ಮಾರ್ಟಿಸ್ ರೋಡ್ ಸಮೀಪದ ಬಾಡಿಗೆ ಮನೆಯಿಂದ ನಗದು ಹಣ ಮತ್ತು ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಲಾದ ಘಟನೆ ನಡೆದಿದೆ.

ಬಾಡಿಗೆ ಮನೆಯಲ್ಲಿದ್ದವರು ಡಿ. 14ರಂದು ಮೈಸೂರಿಗೆ ತೆರಳಿ ಜ. 16ರಂದು ವಾಪಸ್ ಬಂದಾಗ ಬಾಗಿಲಿನ ಬೀಗ ಮುರಿದಿತ್ತು.
ಒಳಗೆ ಹೋಗಿ ನೋಡಿದಾಗ ಕಪಾಟಿನ ಲಾಕರ್‌ ನಲ್ಲಿ 70,000 ರೂ. ನಗದು, ವಾರ್ಡ್ ರೋಬ್ ನ ಸೂಟ್ಕೇಸ್ ನಲ್ಲಿದ್ದ 2 ಬೆಳ್ಳಿಯ ಬಟ್ಟಲು, 1 ಬೆಳ್ಳಿ ಕಲಶ, 1 ಬೆಳ್ಳಿ ಚಮಚ, 1 ಬೆಳ್ಳಿ ಕಪ್, 20 ಬೆಳ್ಳಿ ನಾಣ್ಯಗಳು, ಬೆಳ್ಳಿಸರ, ಬೆಳ್ಳಿಯ ದೀಪ ಸಹಿತ ಸುಮಾರು 56,000 ರೂ. ಮೌಲ್ಯದ ಸೊತ್ತುಗಳನ್ನು ಕಳ್ಳರು ಕಳವು ಮಾಡಿದ್ದಾರೆ.

ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.