

ಯುವಕನಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಪಾಣೆಮಂಗಳೂರು ನೆಹರೂ ನಗರ ನಿವಾಸಿ ಸುಲೈಮಾನ್ ಎಂಬುವವರಿಗೆ ನಿಸಾರ್ ಎಂಬ ವ್ಯಕ್ತಿ ಚೂರಿ ಇರಿದು ಪರಾರಿಯಾಗಿದ್ದಾನೆ. ಇವರಿಬ್ಬರು ನೆಹರೂ ನಗರದ ಬಳಿ ಬಂದಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ನಿಸಾರ್ ಸುಲೈಮಾನ್ ಗೆ ಚೂರಿಯಿಂದ ಹೊಟ್ಟೆಯ ಭಾಗಕ್ಕೆ ತಿವಿದಿದ್ದಾನೆ ಎಂದು ಆರೋಪಿಸಲಾಗಿದೆ.
ಸುಲೈಮಾನ್ ರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.