February 18, 2026
WhatsApp Image 2026-02-18 at 5.27.59 PM

ಬಳ್ಳಾರಿ: ಮಂಗಳಮುಖಿ ಮತ್ತು ಯುವಕನ ನಡುವಿನ ಪ್ರೇಮ ಸಂಬಂಧವು ಅತ್ಯಂತ ದುರಂತಮಯವಾಗಿ ಅಂತ್ಯಗೊಂಡಿದೆ. ಆರು ವರ್ಷಗಳಿಂದ ಒಟ್ಟಿಗೆ ವಾಸವಾಗಿದ್ದ ಇವರಿಬ್ಬರು ಬಾಡಿಗೆ ಮನೆಯೊಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ನಗರದಲ್ಲಿ ನಡೆದಿದೆ.

ಬಳ್ಳಾರಿ ತಾಲೂಕಿನ ಚಾಗನೂರು ಗ್ರಾಮದ ಮಂಗಳಮುಖಿ ಸುಹಾಸಿನಿ (29) ಮತ್ತು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮಲ್ಪನಗುಡಿ ಗ್ರಾಮದ ಶೇಖರ್ ಅಲಿಯಾಸ್ ಮಣಿ (31). ಮಣಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಸುಹಾಸಿನಿ ಮಂಗಳಮುಖಿ ಎಂದು ತಿಳಿದಿದ್ದರೂ ಅವಳನ್ನು ಪ್ರೀತಿಸಿ, ಕಳೆದ ಆರು ವರ್ಷಗಳಿಂದ ಬಳ್ಳಾರಿಯ ಬಾಡಿಗೆ ಮನೆಯೊಂದರಲ್ಲಿ ಜತೆಯಾಗಿ ವಾಸಿಸುತ್ತಿದ್ದರು. ಆದರೆ, ಇದೀಗ ಇಬ್ಬರೂ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡುಬಂದರೂ, ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ. ಹಣದ ವಿಚಾರಕ್ಕಾಗಿ ಮಣಿಯೇ ಸುಹಾಸಿನಿಯನ್ನು ಕೊಲೆ ಮಾಡಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮಂಗಳಮುಖಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ.  ಸದ್ಯ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಬಳ್ಳಾರಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಬಳ್ಳಾರಿಯ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.