ಪುತ್ತೂರು: ಜೀಪು ಬೈಕ್‌ ಮದ್ಯೆ ಅಪಘಾತ : ಬೈಕ್‌ ಸವಾರ ಸಾವು- ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಢಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಬಡಕ್ಕೋಡಿ ಕಡ್ಯ ನಿವಾಸಿ ಲೋಕೇಶ್(48) ಮೃತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದಿಬಂದಿದೆ. ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ ಅವರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆ ಅವರು ಚಲಾಯಿಸುತ್ತಿದ್ದ ಬೈಕ್ ಗೆ ಜೀಪು ಢಿಕ್ಕಿ ಹೊಡೆದು, ಢಿಕ್ಕಿಯ ರಭಸಕ್ಕೆ ಬೈಕ್‌ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದುಕೊಂಡು ಹೋಗಿದ್ದು,ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಪುತ್ತೂರು ಸಂಚಾರಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.