March 5, 2026
WhatsApp Image 2024-02-19 at 6.00.48 PM

ಡುಪಿ:ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಡೆಲ್ಟಾ ಬೀಚ್‌ನಲ್ಲಿ ನೀರಿಗೆ ಇಳಿದು ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯ ಸಿಬಂದಿ ರಕ್ಷಿಸಿರುವ ಘಟನೆ ನಡೆದಿದೆ.

ಬೆಂಗಳೂರು ಮೂಲದವರೆನ್ನಲಾದ ಇಬ್ಬರು ಯುವಕರು ಮತ್ತು ಮೂವರು ಯುವತಿಯರು ಸೇರಿದಂತೆ ಒಟ್ಟು 5 ಮಂದಿ ನೀರಿಗೆ ಇಳಿದಿದ್ದು, ಇಬ್ಬರು ಯುವಕರು ನೀರಿನಲ್ಲಿ ಈಜಲು ಮುಂದಾಗಿದ್ದರು.

ಈಜುತ್ತಾ ಮುಂದೆ ಹೋದ ಅವರು ಸಮುದ್ರದ ಅಲೆಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದರು.

ಇನ್ನು ಈ ಸಂದರ್ಭದಲ್ಲಿ ಅವರ ಬೊಬ್ಬೆ ಕೇಳಿ ಸ್ಥಳೀಯ ಸೀಬರ್ಡ್‌ ಮತ್ತು ಡೆಲ್ಟಾ ಬೋಟ್‌ ಹಾಗೂ ವಾಟರ್‌ ಸ್ಪೋರ್ಟ್ಸ್ ಬೋಟುಗಳ ಸಿಬಂದಿ ವಿವೇಕ್‌ ಪುತ್ರನ್‌, ರಮೇಶ್‌ ಬಂಗೇರ, ಕೃಷ್ಣ ಅವರು ತಕ್ಷಣ ಧಾವಿಸಿ ಬಂದರು ಬೋಟಿನ ಸಹಾಯದಿಂದ ಮುಳುಗುತ್ತಿದ್ದ ಇಬ್ಬರನ್ನೂ ರಕ್ಷಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.