ಮಂಗಳೂರು: ಗಾಂಜಾ ಮಾರಾಟ; ಇಬ್ಬರು ವಶಕ್ಕೆ

ಮಂಗಳೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಮಾ. 14ರಂದು ವಶಕ್ಕೆ ಪಡೆದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ತಿರುವೈಲ್‌ ಗ್ರಾಮದ ವಾಮಾಂಜೂರು ಗ್ರಾಮದಲ್ಲಿ ನಡೆದಿದೆ.ಆರೋಪಿಗಳನ್ನು ದೇರಳಕಟ್ಟೆ ಬೆಳ್ಮ ಗ್ರಾಮದ ಕನಕೂರು ಪದವು ಮನೆ ನಿವಾಸಿ ಅಶ್ರಫ್‌ ಯಾನೆ ಪೊಂಗ ಅಶ್ರಫ್‌ (30), ಅದೇ ಗ್ರಾಮದ ತಿಲಕನಗರ ನಿವಾಸಿ ಮೊಹಮ್ಮದ್‌ ಅಲ್ಫಾಜ್‌ (26) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 115 ಗ್ರಾಂ ಮೌಲ್ಯದ ಗಾಂಜಾ, ಮೊಬೈಲ್‌ ಫೋನ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಪೊಲೀಸರು ವಶಕ್ಕೆ ಪಡೆದ ಸೊತ್ತುಗಳ ಒಟ್ಟು ಮೌಲ್ಯ 10,300 ರೂ. ಆಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎನ್‌.ಡಿ.ಪಿ.ಎಸ್‌ ಕಾಯ್ದೆ ಪ್ರಕರಣ ದಾಖಲಾಗಿರುತ್ತದೆ.

ಆರೋಪಿ ಅಶ್ರಫ್‌ ಯಾನೆ ಪೊಂಗ ಆಶ್ರಫ್‌ ಮೇಲೆ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ವಾರೆಂಟ್‌ ಜಾರಿಯಲ್ಲಿದೆ. ಈತ ಸುಮಾರು 6 ತಿಂಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

Check Also

ನಾಳೆ (ಜು.20) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ …

Leave a Reply

Your email address will not be published. Required fields are marked *

You cannot copy content of this page.