ಉಡುಪಿ: ಕರಾವಳಿ ಬೈಪಾಸ್ ಸಮೀಪದ ಮಣಿಪಾಲ ಇನ್ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ವೇಳೆ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಅಂಬಲಪಾಡಿಯ ಅಬ್ದುಲ್ ರಶೀದ್(60) ಮೃತಪಟ್ಟವರಾಗಿದ್ದಾರೆ. ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದಾಗ ಸ್ಕೂಟರ್ಗೆ ಲಾರಿ ಹಿಂದಿನಿಂದ ಡಿಕ್ಕಿ ಹೊಡೆಯಿತು. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು.
ಮೃತ ಅಬ್ದುಲ್ ರಶೀದ್ ಸಮೋಸ ಮಾರಾಟದ ವೃತ್ತಿ ಮಾಡಿಕೊಂಡಿದ್ದರೆಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.