ಮೂಡುಬಿದಿರೆ: ಮೂಡಬಿದಿರೆಯ ಸಮೀಪ ಬೈಕ್‌ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಸವಾರ ಮೃತಪಟ್ಟ ಘಟನೆ ರಾ.ಹೆದ್ದಾರಿಯ ತೋಡಾರಿನಲ್ಲಿ ನಡೆದಿದೆ.
ಮೃತಪಟ್ಟವರು ಸಿದ್ಧಕಟ್ಟೆ ನಿವಾಸಿ, ಮೇಸ್ತ್ರಿ ಕೆಲಸ ಮಾಡುತ್ತಿದ್ದ ಮೋಹನ್ ಗೌಡ (45) ಎಂದು ತಿಳಿಯಲಾಗಿದೆ.
ಸಹ ಸವಾರ ನಾರಾಯಣ ಗೌಡ ಸಣ್ಣಪುಟ್ಟ ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇವರಿಬ್ಬರೂ ಮೂಡುಬಿದಿರೆಯಲ್ಲಿ ನಡೆದಿದ್ದ ಮದುವೆಯಲ್ಲಿ ಭಾಗವಹಿಸಿ ಅಲ್ಲಿಂದ ಮಿಜಾರು ಧೂಮಚಡವಿನಲ್ಲಿ ನಡೆಯುತ್ತಿದ್ದ ಇನ್ನೊಂದು ಮದುವೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ತೋಡಾರು ಮೈಟ್ ಕಾಲೇಜು ಸಮೀಪ ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಪಾಲಡ್ಕದ ನಿವಾಸಿ, ಮೂರನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಏರನ್ ಮಥಾಯಸ್ ಚಲಾಯಿಸುತ್ತಿದ್ದ ವ್ಯಾಗನ್ ಆರ್ ಕಾರು ರಸ್ತೆಯ ಬಲಭಾಗಕ್ಕೆ ಬಂದು ಬೈಕ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಮೋಹನ್ ಗೌಡ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ಅವರು ಮೃತಪಟ್ಟಿರುವುದು ದೃಢಪಟ್ಟಿದೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.