February 20, 2026
WhatsApp Image 2026-02-20 at 8.33.04 AM
ಬೆಳ್ತಂಗಡಿ: ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು  ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು? 

ಬಾಲಕ ಅಭೀಶ್ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್ ರೀತಿ ಇದ್ದ ಬಾಂಬ್​​ನಿಂದ ಮಕ್ಕಳು ಕ್ರಿಕೆಟ್ ಆಡಿದ್ದಾರೆ. ಓರ್ವ ಬಾಲಕ ಪತ್ತೆಯಾದ ಚೆಂಡಿನಾಕಾರದ ವಸ್ತುವನ್ನು ಬೌಲ್ ಮಾಡಿದ್ದು, ಅಭೀಶ್ ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಈ ವೇಳೆ ಅಭೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡು ಹಂದಿ ಬೇಟೆ ಆಡಲು ಇಟ್ಟಿದ್ದ ಬಾಂಬ್​ ಎಂದು ಶಂಕಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.