March 21, 2026
WhatsApp Image 2024-05-20 at 9.57.09 AM

ಉಳ್ಳಾಲ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನಿಗೆ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಸ್ಥಾನ ಬಳಿ ಸಂಭವಿಸಿದೆ.

ಕಿನ್ಯ ನಿವಾಸಿ ಮನೋಜ್ ಆಚಾರ್ಯ (31) ಚೂರಿ ಇರಿತಕ್ಕೊಳಗಾದ ವ್ಯಕ್ತಿ. ಶರತ್ ಎಂಬಾತ ಚೂರಿಯಿಂದ ಇರಿದ ಆರೋಪಿ ಎಂದು ತಿಳಿಯಲಾಗಿದೆ.

ಘಟನೆ ವಿವರ: ಮನೋಜ್ ಮತ್ತು ಶರತ್ ಗೆ ಕುಟುಂಬ ಹಾಗೂ ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಹಳೇ ದ್ವೇಷ ಇತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶರತ್ ಮನೋಜ್ ಆಚಾರ್ಯ ಎಂಬಾತನನ್ನು ಆಗಾಗ ತಗಾದೆ ಎತ್ತುತ್ತಿದ್ದ. ರವಿವಾರ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮನೋಜ್ ಗೆ ಶರತ್ ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ. ಈ ಬಗ್ಗೆ ಮನೋಜ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.