May 20, 2026
death-acc

← Back

Thank you for your response. ✨

ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಣಿಯೂರಿನಲ್ಲಿ ಮಂಗಳವಾರ ಮುಂಜಾನೆ ನೀರಿನ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಣಿಯೂರು ಸೆಂಟರ್ ನಿವಾಸಿ ಕೃಷ್ಣ ಮೂಲ್ಯ (22) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ಕೃಷ್ಣ ಮೂಲ್ಯ ಅವರು ಮಂಗಳವಾರ ಮುಂಜಾನೆ ಪಣಿಯೂರು ಪೇಟೆಗೆ ಹಾಲು ಖರೀದಿಸಲು ಬಂದಿದ್ದರು. ಹಾಲು ಖರೀದಿಸಿ ಮರಳಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಇವರ ಸ್ಕೂಟರ್ ಮುಂದೆ ಚಲಿಸುತ್ತಿದ್ದ ನೀರಿನ ಟ್ಯಾಂಕರ್, ಕಂಚುಗರ ರಸ್ತೆಗೆ ತಿರುಗುವುದಕ್ಕಾಗಿ ಏಕಾಏಕಿ ಬಲಬದಿಗೆ ಕ್ರಾಸ್ ಮಾಡಿದೆ. ಈ ವೇಳೆ ನಿಯಂತ್ರಣ ಸಿಗದೆ ಕೃಷ್ಣ ಮೂಲ್ಯ ಅವರ ಸ್ಕೂಟರ್ ಟ್ಯಾಂಕರ್‌ಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕೃಷ್ಣ ಮೂಲ್ಯ ಅವರು ರಸ್ತೆಗೆ ಎಸೆಯಲ್ಪಟ್ಟು, ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣವೇ ಸ್ಥಳೀಯರು ಉಡುಪಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಯುವಕ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.