ಸುಳ್ಯ: ಬಾಲಕಿಯ ಮೇಲೆ‌ ಲೈಂಗಿಕ ದೌರ್ಜನ್ಯ ಆರೋಪ – ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಅರೆಸ್ಟ್..!

ಸುಳ್ಯ: ಬಾಲಕಿಯ ಮೇಲೆ‌ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಎಂಬಾತನನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂದರ್ಭ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಮುಂಜಾನೆ ಜಾವ ಪ್ರಸಾದ್ ಪಂಗಣ್ಣಾಯನನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಪ್ರಸಾದ್ ಪಾಂಗಣ್ಣಾಯ ಕಾಣಿಯೂರು ಸಮೀಪದ ಬೆಳಂದೂರು ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.

Check Also

ಮೂಲ್ಕಿ: ಎರಡು ತಲೆಯ ಕರುವಿಗೆ ಜನ್ಮ ನೀಡಿದ ಹಸು! ದೇವರ ಪವಾಡವೆಂದ ಗ್ರಾಮಸ್ಥರು

ಮೂಲ್ಕಿ: ಇಲ್ಲಿ ಹಸುವೊಂದು ಎರಡು ತಲೆಯ ಕರುವಿಗೆ ಜನ್ಮ ನೀಡಿದೆ. ಈ ವಿಶಿಷ್ಟ ನೋಟವು ಇಡೀ ಹಳ್ಳಿಯನ್ನು ಬೆಚ್ಚಿಬೀಳಿಸಿದೆ. ಗ್ರಾಮಸ್ಥರು …

Leave a Reply

Your email address will not be published. Required fields are marked *

You cannot copy content of this page.