March 16, 2026
WhatsApp Image 2024-01-21 at 8.53.24 AM

ಮಂಗಳೂರು: ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ಕೆಳಕಂಡ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ಗುರುತಿಸಲಾಗಿದೆ.  131 ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.  ನಗರದಾದ್ಯಂತ 57 ಸೆಕ್ಟರ್ ಮೊಬೈಲ್ 24 ಗಂಟೆ ಹಗಲು ರಾತ್ರಿ ಗಸ್ತಿನಲ್ಲಿರುವ ವ್ಯವಸ್ಥೆಯನ್ನು ಮಾಡಲಾಗಿದೆ.  14 ಸ್ಥಳಗಳಲ್ಲಿ ಚೆಕ್ ಪಾಯಿಂಟ್ ಗಳನ್ನು ನಿಯೋಜಿಸಲಾಗಿದೆ.  9 ಸಿಎಆರ್ ಮತ್ತು 3 ಕೆಎಸ್ಆರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.  ತಡರಾತ್ರಿ ಮತ್ತು ಮುಂಜಾನೆ ವಿಶೇಷ ಗಸ್ತುಗಳನ್ನು ಆಯೋಜಿಸಲಾಗಿದೆ.  ಮಂಗಳೂರು ನಗರದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿಧ್ವಂಸಕ ತಪಾಸಣಾ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ.  ರಾಜ್ಯದಲ್ಲಿ ಅಳವಡಿಸಲಾದ ಕ್ರಮದಂತೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ, ರ್ಯಾಲಿಗಳಿಗೆ ಅನುಮತಿ ನೀಡಿರುವುದಿಲ್ಲ.  ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಆಯಾ ಎ.ಸಿ.ಪಿ ರವರ ಮಾರ್ಗದರ್ಶನದಲ್ಲಿ ಈಗಾಗಲೇ ಶಾಂತಿ ಸಭೆಗಳನ್ನು ಆಯೋಜಿಸಲಾಗಿರುತ್ತದೆ.  ಪ್ರತೀ ಪೊಲೀಸ್ ಠಾಣಾ ಮಟ್ಟದಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಲ್ಲಿ ಏರಿಯಾ ಡಾಮಿನೇಷನ್ ಮತ್ತು ರೂಟ್ ಮಾರ್ಚ್ ಕೈಗೊಳ್ಳಲಾಗಿದೆ.  ಮಹಾನಗರ ಪಾಲಿಕೆಯೊಂದಿಗೆ ಸಮನ್ವಯ ಸಾದಿಸಿ ಫ್ಲೆಕ್ಸ್, ಬ್ಯಾನರ್ ಬಂಟಿಂಗ್ಸ್ ಅಳವಡಿಕೆಗಳ ಮೇಲೆ ಸೂಕ್ತ ನಿಗಾ ಇರಿಸಲಾಗಿದೆ ಮತ್ತು ಆಯೋಜಕರಿಗೆ ಅವುಗಳ ಭದ್ರತೆಯನ್ನು ಖಚಿತಪಡಿಸಲು ಸೂಚಿಸಲಾಗಿದೆ.  ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ: 21-01-2024ರ ಮದ್ಯರಾತ್ರಿಯಿಂದ ದಿನಾಂಕ: 23-01-2024 ರ ಮುಂಜಾನೆಯ ವರೆಗೆ ನಗರದಲ್ಲಿರುವ ಎಲ್ಲಾ ರೀತಿಯ ಬಾರ್ ಮತ್ತು ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.  ಮಂಗಳೂರ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ 3-ಡಿಸಿಪಿ, ೦6-ಎಸಿಪಿ, 11-ಪಿ.ಐ ಮತ್ತು 37-ಪಿ.ಎಸ್.ಐ ದರ್ಜೆಯ ಅಧಿಕಾರಿಗಳನ್ನು ಹಾಗೂ 781 ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ.

About The Author

Leave a Reply

Your email address will not be published. Required fields are marked *

You cannot copy content of this page.