

ಉಡುಪಿ: ಪಶ್ಚಿಮ ಬಂಗಾಳದ ವ್ಯಕ್ತಿಯೋರ್ವ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ಕಾಂಕ್ರೀಟ್ ಸಾಗಾಟದ ಟ್ರಕ್ ಚಾಲಕ ರವಿ ಮೋಹಂತ್ (24) ಎಂದು ಗುರುತಿಸಲಾಗಿದೆ.
ಮಣಿಪಾಲ ಪೊಲೀಸ್ ಅಧಿಕಾರಿ ಎಎಸ್‌ಐ ನಾಗೇಶ್ ನಾಯಕ್ ಮತ್ತು ತನಿಖಾ ಸಹಾಯಕ ಸುಕುಮಾರ್ ಶೆಟ್ಟಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ