February 21, 2026
WhatsApp Image 2026-02-21 at 5.26.22 PM

ಬೆಳ್ತಂಗಡಿ : ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಪ್ರಸನ್ನ ಕಾಲೇಜು ಸಮೀಪ ಬೈಕ್ ಡಿವೈಡರ್‌ಗೆ ಢಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಗಾಯಾಳುವನ್ನು ಬೆಳ್ತಂಗಡಿ ತಾಲೂಕಿನ ಬೆಳಾಲಿನ ಮಾಯಾ ನಿವಾಸಿ ಸಂಜೀವ (50) ಎಂದು ಗುರುತಿಸಲಾಗಿದೆ. ಉಜಿರೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದ ವೇಳೆ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ

About The Author

Leave a Reply

Your email address will not be published. Required fields are marked *

You cannot copy content of this page.