

ಮಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ ಖಂಡಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಕನ್ನಡ ಪರ ಸಂಘಟನೆಗಳು ಶನಿವಾರ (ಮಾರ್ಚ್.22) ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಮತ್ತು ಕೆನರಾ ಬಸ್ ಮಾಲಕರ ಸಂಘ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
“ಎಲ್ಲಾ ಸಂಘಟನೆಗಳ ಬೇಡಿಕೆಗೆ ನಮ್ಮ ಸಹಾನುಭೂತಿ ಇದೆ. ಆದರೆ, ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಕಾಲವೆಂಬ ಕಾರಣದಿಂದ ಶನಿವಾರ ಬಸ್ ಬಂದ್ ಮಾಡುವುದಿಲ್ಲ. ಬಸ್ ಗಳು ಸಾಮಾನ್ಯವಾಗಿ ಓಡಲಿವೆ,” ಎಂದು ದ.ಕ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಜ್ ಪರ್ತಿಪಾಡಿ ತಿಳಿಸಿದ್ದಾರೆ.
ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಳ್ಳಾಲ್ ಕೂಡ “ಬಂದ್ ಗೆ ನಮ್ಮನ್ನು ಕೇಳಿಕೊಂಡಿಲ್ಲ, ಸಾರ್ವಜನಿಕರು ತೊಂದರೆ ಅನುಭವಿಸಬಾರದು ಎಂಬ ಕಾರಣಕ್ಕೆ ನಾವು ಬಸ್ ನಿಲುಗಡೆ ಮಾಡೋಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.