March 21, 2026
WhatsApp Image 2024-05-07 at 9.49.39 AM
ಬಂಟ್ವಾಳ : ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪಾಣೆಮಂಗಳೂರಿನಲ್ಲಿ ನಡೆದಿದೆ.
ಮೃತ ಯುವಕನನ್ನು ಸಜೀಪ ನಿವಾಸಿ ಅಲ್ತಾಫ್ (18) ಎಂದು ಗುರುತಿಸಲಾಗಿದೆ.
ಬಿ.ಸಿ.ರೋಡಿನಿಂದ ಬರುತ್ತಿದ್ದ ರಿಕ್ಷಾ ಹಾಗೂ ಪಾಣೆಮಂಗಳೂರು ಪೇಟೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತ ಸಂದರ್ಭ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ರಿಕ್ಷಾದಲ್ಲಿದ್ದ ಪ್ರಯಾಣಿಕ ಅಲ್ತಾಫ್ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರವಾದ ಗಾಯವಾಗಿತ್ತು. ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ.
ಬಂಟ್ವಾಳ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.