March 19, 2026
WhatsApp Image 2025-03-18 at 2.55.22 PM

ಉಡುಪಿ: ಈಗಾಗಲೇ ಪ್ರಸಕ್ತ ಸಾಲಿನ ಮುಂಗಾರು ಮಳೆ ಆರಂಭವಾಗಿದ್ದು ಇನ್ನೂ ಕೆಲವು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸಿಡಿಲು, ಗಾಳಿ-ಮಳೆಯಿಂದ ಸಾರ್ವಜನಿಕರಿಗೆ ಮತ್ತು ಜಾನುವಾರುಗಳಿಗೆ ಆಘಾತವಾಗುವ ಸಾಧ್ಯತೆ ಇದ್ದು ಮುಂಜಾಗ್ರತಾ ಕ್ರಮ ವಹಿಸುವಂತೆ ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶ ನೀಡಿದ್ದಾರೆ.

ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ಪ್ರಾಧಿಕಾರದಿಂದ ಹೊರಡಿಸುವ ಮುನ್ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮಳೆಗಾಲದಲ್ಲಿ ಮಕ್ಕಳು, ಸಾರ್ವಜನಿಕರು ಮನೆಯ ಹೊರಗೆ ಹೋಗುವುದು ಕಡಿಮೆ ಮಾಡಬೇಕು.

ಮಾನವ ಹಾಗೂ ಜಾನುವಾರುಗಳ ಹಾನಿಯನ್ನು ತಡೆಗಟ್ಟಲು ಯಾವೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕರು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.