ಕಾಪು: ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶೇಖರ ಆಚಾರ್ಯ ನಿಧನ

ಕಾಪು: ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಾಪು ಶೇಖರ ಆಚಾರ್ಯ (74) ಅವರು ಜೂ.21 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಸಹೋದರರು, ಸಹೋದರಿಯನ್ನು ಮತ್ತು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಅಪಘಾತದಿಂದ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಮನೆಗೆ ವಾಪಸ್ಸಾಗಿದ್ದ ಅವರು ವಿಶ್ರಾಂತಿಯಲ್ಲಿದ್ದರು‌.

ಶುಕ್ರವಾರ ಬೆಳಗ್ಗಿನ ಜಾವ ತೀವ್ರ ಅಸ್ವಸ್ಥತಗೊಂಡು ನಿಧನ ಹೊಂದಿದ್ದಾರೆ.

ಸಾಮಾಜಿಕ, ಧಾರ್ಮಿಕ ಮತ್ತು ಸಹಕಾರಿ ಕ್ಷೇತ್ರದಲ್ಲಿ ಮುಂದಾಳುತ್ವ ವಹಿಸಿಕೊಂಡು ಸೇವೆ ಸಲ್ಲಿಸುತ್ತಿದ್ದ ಅವರು ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಕಾರ್ಯದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯ ನಿರ್ವಹಿಸಿದ್ದರು. ಕಾಪು ಸಿಎ ಬ್ಯಾಂಕ್ ಮಹಾಪ್ರಬಂಧಕರಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದು ಬಳಿಕ ವಿಕಾಸ ಕ್ರೆಡಿಟ್ ಕೋ.‌ ಆಪರೇಟಿವ್ ಸೊಸೈಟಿಯನ್ನು ಪ್ರಾರಂಭಿಸಿ, ಅದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.

ವಿಶ್ವಕರ್ಮ ಸಮಾಜದ ಮುಂಚೂಣಿಯ ನಾಯಕರಾಗಿದ್ದ ಅವರು ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ಧಾರ ಸಮಿತಿಯಲ್ಲಿ ವಿಶ್ವಕರ್ಮ ಸಮಾಜವನ್ನು ಪ್ರತಿನಿಧಿಸುತ್ತಿದ್ದರು. ಕಾಪು ಪರಿಸರದ ದೇವಸ್ಥಾನ, ದೈವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರ ಕಾರ್ಯದಲ್ಲೂ ಪೂರ್ಣ ಸಹಕಾರ ನೀಡುತ್ತಾ ಬಂದಿದ್ದರು.

 

Check Also

ಮಂಗಳೂರು: ಹೆದ್ದಾರಿ ಮಧ್ಯೆ ಧಗ ಧಗನೆ ಹೊತ್ತಿ ಉರಿದ ಬಿಎಂಡಬ್ಲ್ಯು ಕಾರು..!

ಮಂಗಳೂರು: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ …

Leave a Reply

Your email address will not be published. Required fields are marked *

You cannot copy content of this page.