March 15, 2026
WhatsApp Image 2023-10-21 at 9.25.19 AM

ಮಂಗಳೂರು: ದಾಂಡಿಯಾ ನೈಟ್ಸ್ ಇವೆಂಟ್ ಗೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಮಂಗಳೂರು ನಗರ ಪೊಲೀಸ್ ಇಲಾಖೆಗೆ ಹಿಂದೂ ಪರ ಸಂಘಟನೆಗಳು ಇವೆಂಟ್ ಗೆ ಅವಕಾಶ ನೀಡದಂತೆ ಮನವಿ ಮಾಡಿವೆ.

ದಾಂಡಿಯಾ ನೃತ್ಯ ಉತ್ತರಭಾರತದ ಪವಿತ್ರ ಧಾರ್ಮಿಕ ಕಾರ್ಯಕ್ರಮ. ಈ ಕಾರ್ಯಕ್ರಮದ ಹೆಸರಿನಲ್ಲಿ ಮೋಜು ಮಸ್ತಿ ಮಾಡಲಾಗುತ್ತೆ, ಅಸಭ್ಯವಾಗಿ ವರ್ತಿಸಲಾಗುತ್ತೆ ಎಂದು ಬಜರಂಗದಳ ವಿರೋಧ ವ್ಯಕ್ತಪಡಿಸಿದೆ. ಹೀಗಾಗಿ ವಿಶ್ವ ಹಿಂದೂ ಪರಿಷತ್ ಮನವಿ ಬೆನ್ನಲ್ಲೇ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ತುರ್ತು ಸಭೆ ಕರೆದಿದ್ದಾರೆ. ಸಭೆಯ ಬಳಿಕ ಷರತ್ತುಬದ್ಧವಾಗಿ ದಾಂಡಿಯಾ ಇವೆಂಟ್ಸ್ ಆಚರಿಸಲು ಅನುಮತಿ ನೀಡಲಾಗಿದೆ. ಯಾವುದೇ ವಿವಾದಾಸ್ಪದ ಘಟನೆಗಳಿಗೆ ಅವಕಾಶ ನೀಡದಂತೆ ಕಾರ್ಯಕ್ರಮ ನಡೆಸಲು ಆಯೋಜಕರಿಗೆ ಸೂಚನೆ ನೀಡಲಾಗಿದೆ. ಆದರೆ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಅಗ್ರಹಿಸಿದೆ. ಅನುಮತಿ ನೀಡಿದ್ದೇಯಾದಲ್ಲಿ ಪ್ರತಿಭಟನೆಯ ಎಚ್ಚರಿಕೆಯನ್ನು ಹಿಂದೂ ಮುಖಂಡ ಪ್ರದೀಪ್ ಸರಿಪಲ್ಲ ನೀಡಿದ್ದಾರೆ. ಹೀಗಾಗಿ ಕಾರ್ಯಕ್ರಮಗಳಿಗೆ ಪೊಲೀಸ್ ಭದ್ರತೆ ನೀಡುವ ಸಾದ್ಯತೆಯಿದೆ.

About The Author

Leave a Reply

Your email address will not be published. Required fields are marked *

You cannot copy content of this page.