ಸುರತ್ಕಲ್ : ನದಿಯಲ್ಲಿ ಮುಳುಗಿ ಯುವಕ ಮೃತ್ಯು

ಸುರತ್ಕಲ್ : ನಗರದ ಹೊರವಲಯದ ಮರವೂರು ರೈಲ್ವೆ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತರನ್ನು ಮೂಲತಃ ಬಜ್ಜೆ ನಿವಾಸಿ , ಸುರತ್ಕಲ್ ಸಮೀಪದ ಚೊಕ್ಕಬೊಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಾಕಿ‌ರ್ (30) ಎಂದು ಗುರುತಿಸಲಾಗಿದೆ. ಶಾಕಿರ್ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೆ ಮೇಲ್ಸೇತುವೆಯ ಕೆಳ ಭಾಗದ ನದಿಯಲ್ಲಿ ಈಜಲೆಂದು ತೆರಳಿದ್ದು ಶಾಕಿರ್ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ಕೂಡಲೇ ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ತಿಳಿಸಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಕಾವೂರು ಪೊಲೀಸರು ಹಾಗೂ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್‌ಗೆ ಜಾಮೀನು

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಬೈಂದೂರಿನ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ 5 ಕೋಟಿಗೂ ಅಧಿಕ ಹಣ …

Leave a Reply

Your email address will not be published. Required fields are marked *

You cannot copy content of this page.