
ಉಡುಪಿ : ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಜಿಲ್ಲೆಯ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳು, ಆದ್ಯತಾ ಪಡಿತರ ಚೀಟಿಗಳಿಗೆ ಮತ್ತು ಆದ್ಯತೇತರ ಪಡಿತರ ಚೀಟಿಗಳಿಗೆ ಕುಟುಂಬದ ಸದಸ್ಯರ ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ತೆಗೆಯುವ ಬಗ್ಗೆ ಡಿ. 31ರ ವರೆಗೆ ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.
