ಉಡುಪಿ: ಇಂದು ಜಿಲ್ಲೆಯಾದ್ಯಂತ ಅಹಿತಕರ ನಡೆಯದಂತೆ ಕ್ರಮ – ಎಸ್ಪಿ ಡಾ.ಕೆ.ಅರುಣ್

ಉಡುಪಿ: ಅಯೋಧ್ಯೆಯ ಶ್ರೀರಾಮ ಮಂದಿರದ ನೂತನ ಕಟ್ಟಡದಲ್ಲಿ ಇಂದು ನಡೆಯಲಿರುವ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಯಾವುದೇ ಅಹಿತಕ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ನೇತೃತ್ವದಲ್ಲಿ ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಮೂವರು ಡಿವೈಎಸ್ಪಿಗಳು, 10 ಪೊಲೀಸ್ ನಿರೀಕ್ಷಕರು, 47 ಪೊಲೀಸ್ ಉಪನಿರೀಕ್ಷಕರು, 670 ಪೊಲೀಸ್ ಸಿಬಂದಿ, 100 ಗೃಹ ರಕ್ಷಕ ದಳದ ಸಿಬ್ಬಂದಿ, ಮೂರು ಕೆಎಸ್‌ಆರ್‌ಪಿ, ಎಂಟು ಜಿಲ್ಲಾ ಸಶಸ್ತ್ರ ಮೀಸಲು ಪಡೆ ತುಕಡಿಯನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.