June 14, 2025
WhatsApp Image 2023-02-22 at 3.30.02 PM

ಮಣಿಪಾಲ: ಮಣಿಪಾಲದ ದಶರಥ ನಗರದ ಖಾಸಗಿ ವಸತಿಗೃಹದ ನಾಲ್ಕನೇ ಮಹಡಿಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಪ್ರೊಫೆಸರ್ ಓರ್ವರ ಶವವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬುಧವಾರ ಸಂಭವಿದೆ. ಇವರು ಮೃತಪಟ್ಟು ನಾಲ್ಕು ದಿನ ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಮೃತ ವ್ಯಕ್ತಿ ಉತ್ತರಪ್ರದೇಶದ ಅಹಮದ್ ಮಿರ್ಜಾ (38) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದ ಆರ್ಕಿಟೆಕ್ಟ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದರು. ಮಣಿಪಾಲ ಎಸ್‌ಐ ನವೀನ್ ನಾಯ್ಕ್, ಹೆಡ್ ಕಾನ್ಸ್‌ಟೇಬಲ್ ಸುಕುಮಾರ್ ಘಟನಾ ಸ್ಥಳಕ್ಕೆ ಆಗಮಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.

About The Author

Leave a Reply

Your email address will not be published. Required fields are marked *

<p>You cannot copy content of this page.</p>