March 22, 2026
WhatsApp Image 2026-03-18 at 9.19.51 AM

ಮಾಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಅಮಾನತು ಬಳಿಕ ಇದೀಗ ಶಿಕ್ಷಕಿ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ವೇಣೂರು ಠಾಣೆಯಲ್ಲಿ ಸಂದೇಶ್​​ ವಿರುದ್ಧ ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್​ಐಆರ್​ ದಾಖಲಾಗಿದ್ದು, 2018 ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. 2020ರಲ್ಲಿ ಸಂದೇಶ್​​​ ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯಲ್ಲಿರುವ ವೇಣೂರು ಪೊಲೀಸ್ ಠಾಣೆ ಸರ್ಕಲ್ ಇನ್ಸ್​ಪೆಕ್ಟರ್​​​ ಆಗಿದ್ದರು. ಹೀಗಾಗಿ ವೇಣೂರು ಠಾಣಾ ವ್ಯಾಪ್ತಿಯಲ್ಲೇ ಅತ್ಯಾಚಾರ ಆರೋಪದಡಿ ಸೆಕ್ಷನ್ 376(2)(a)(1), 376(2)(n), 384, 506ರಡಿ ಕೇಸ್ ದಾಖಲಾಗಿದೆ.

ಸಂದೇಶ್ ವಿರುದ್ಧ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ತಿಳಿಸಿದ್ದು, ಇದೀಗ ಮತ್ತೊಬ್ಬ ಮಹಿಳೆ ಬಲವಂತವಾಗಿ ಅತ್ಯಾಚಾರ ಮಾಡಿದ್ದಾರೆಂದು ಘಟನೆಯ ಸರಿಸುಮಾರು ಮೂರು ವರ್ಷಗಳ ಬಳಿಕ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ಯಾವ ಹಂತಕ್ಕೆ ತಲುಪುತ್ತೆ ಅನ್ನುವುದು ಕಾದುನೋಡಬೇಕಿದೆ.

About The Author

Leave a Reply

Your email address will not be published. Required fields are marked *

You cannot copy content of this page.