March 20, 2026
WhatsApp Image 2025-05-22 at 8.31.18 AM

ಕಾಪು : ಕಟಪಾಡಿ ಏಣಗುಡ್ಡೆಯಲ್ಲಿ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಕಾಪು ಪೊಲೀಸರು 1,780 ರೂ. ನಗದು ಸಹಿತ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎ ಎಸ್ ಐ ದಯಾನಂದ ಅವರಿಗೆ ದೊರಕಿದ ಖಚಿತ ಮಾಹಿತಿಯ ಮೇರೆಗೆ ಸಿಬ್ಬಂಧಿ ಯೊಂದಿಗೆ ದಾಳಿ ನಡೆಸಿ ಮಟ್ಕಾ ಚೀಟಿ ಬರೆಯುತ್ತಿದ್ದ ಪ್ರಮೋದ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿ ತಾನು ಹೆಬ್ರಿಯ ದಯಾನಂದ ಎಂಬವರ ಪರವಾಗಿ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಂದ ಸಂಗ್ರಹಿಸಿದ್ದು ಹೀಗೆ ಸಂಗ್ರಹಿಸಿದ್ದ ಹಣವನ್ನು ಇಬ್ಬರು ಹಂಚಿಕೊಳ್ಳುತ್ತೇವೆ ಎಂದು ಮಾಹಿತಿಯನ್ನು ನೀಡಿದ್ದಾರೆ.

ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

About The Author

Leave a Reply

Your email address will not be published. Required fields are marked *

You cannot copy content of this page.