ಮಂಗಳೂರು: ಇನ್ನು ಮುಂದೆ ಹಿಂದೂ ಧಾರ್ಮಿಕ ಕಾರ್ಯಕ್ರಮ, ಮೆರವಣಿಗೆಗಳಿಗೆ ಶ್ರೀರಾಮ ಸೇನೆಯಿಂದಲೇ ರಕ್ಷಣೆ ನೀಡುತ್ತೇವೆ. ಶಸ್ತ್ರಸಜ್ಜಿತ ತಲವಾರು ಹಿಡಿದ 50 ಮಂದಿ ಶ್ರೀರಾಮ ಸೇನೆಯ ಕಾರ್ಯಕರ್ತರು ರಕ್ಷಣೆ ನೀಡಲಿದ್ದಾರೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಹಾದಿ ಶಕ್ತಿಗಳು ಹದ್ದು ಮೀರುತ್ತಿವೆ. ಗಣಪತಿ ಮೆರವಣಿಗೆ ಮೇಲೆ ಪೆಟ್ರೋಲ್ ಬಾಂಬ್ ಎಸೆಯುವ ಮಟ್ಟಕ್ಕೆ ಬಂದು ನಿಂತಿದ್ದಾರೆ. ಇದಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರವೇ ನೇರ ಹೊಣೆ, ಸರಕಾರವೇ ಅವರ ಜತೆ ನಿಂತಿದೆ. ಜೆಹಾದಿ ಗೂಂಡಾಗಳನ್ನು ತಡೆಯಲು ಸಾಧ್ಯವಾಗದ ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ತಿರುಪತಿ ಲಡ್ಡು ಪ್ರಸಾದದ ವಿಚಾರದಲ್ಲಿ ಹಿಂದೂಗಳಿಗೆ ದೊಡ್ಡ ದ್ರೋಹವಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. ಎಲ್ಲಾ ಹಿಂದೂ ಸಂಘಟನೆಗಳು ಸೇರಿ ಆಂಧ್ರ ಪ್ರದೇಶದ ಮಾಜಿ ಸಿಎಂ ಜಗನ್ ಮನೆಗೆ ಮುತ್ತಿಗೆ ಹಾಕಲು ಚಿಂತನೆ ಮಾಡಲಾಗುತ್ತಿದೆ ಎಂದು ಗಂಗಾಧರ ಕುಲಕರ್ಣಿ ಹೇಳಿದ್ದಾರೆ.