ಉಡುಪಿ: ಸವಿತಾ ಎರ್ಮಾಳ್ ರಾಯಭಾರಿಯಾಗಿ ಆಯ್ಕೆ

ಉಡುಪಿ: ಸವಿತಾ ಎರ್ಮಾಳ್, ಉಪನ್ಯಾಸಕರು, ಸರಕಾರಿ ಪದವಿಪೂರ್ವ ಕಾಲೇಜು ಬ್ರಹ್ಮಾವರ ಇವರನ್ನು “ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ” (ಭೇಟಿ ಬಚಾವೊ ಭೇಟಿ ಪಡಾವೊ) ಮತ್ತು ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಂತ್ರವಿಧಾನಗಳ (ಲಿಂಗ ಆಯ್ಕೆಯ ನಿಷೇಧ) ಕಾಯ್ದೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದ ರಾಯಭಾರಿಯಾಗಿ ಉಡುಪಿ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಯವರಾದ ಡಾ.ಕೆ.ವಿದ್ಯಾಕುಮಾರಿ (ಭಾ.ಆ. ಸೇ.) ಆಯ್ಕೆ ಮಾಡಿರುತ್ತಾರೆ.

ಇವರು ಶ್ರೀ ಜ್ಞಾನಶಕ್ತಿ ಸ್ಥಾನಿಕ ಬ್ರಾಹ್ಮಣ ಸಭಾ (ರಿ.) ಬ್ರಹ್ಮಾವರ ಇದರ ಕಾರ್ಯದರ್ಶಿ ಯಾಗಿರುವರು. ಶ್ರೀ ಶಾಂಕರತತ್ವ ಪ್ರಸಾರ ಸಮಿತಿ ಉಡುಪಿ ಜಿಲ್ಲೆಯ ಸಹಸಂಚಾಲಕ ರಾಗಿರುವರು. ಬ್ರಹ್ಮಾವರದ ಸಮಿತಿಯ ಕಾರ್ಯದರ್ಶಿಯಾಗಿರುವರು. ಅಲ್ಲದೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಇದರ ರಾಷ್ಟ್ರೀಯ ಸೇವಾ ಯೋಜನಾ ಕೋಶ ಬೆಂಗಳೂರು ಇದರ ಮಂಗಳೂರು ವಿಭಾಗದ ವಿಭಾಗಾಧಿಕಾರಿಯಾಗಿ ಮಾನ್ಯ ನಿರ್ದೇಶಕರು ನಿಯೋಜಿಸಿ ರುವರು.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.