ಉಡುಪಿ: ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ ನಡೆದಿದೆ. ವಿಕಾಸ್ ಆಚಾರ್ಯ (22) ಅಪಘಾತದಲ್ಲಿ ಮೃತಪಟ್ಟ ಯುವಕ.
ಕೋಟ ಮಣೂರು ಸುರೇಶ್ ಆಚಾರ್ಯ ಅವರ ಪುತ್ರ ವಿಕಾಸ್ ಸೋಮವಾರ ಮಧ್ಯರಾತ್ರಿ 1:30 ರ ಸುಮಾರಿಗೆ ಸಾಸ್ತಾನದಿಂದ ಕೋಟ ಕಡೆ ಬರುತ್ತಿದ್ದ. ಕೋಟ ಗುಜರಿ ಅಂಗಡಿ ಸಮೀಪ ಬರುವಾಗ ವಿಕಾಸ್‌ಗೆ ಬೈಕ್‌ನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿಯಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಪಲ್ಟಿಯಾಗಿ ಗಂಭೀರ ಗಾಯಗೊಂಡ ವಿಕಾಸ್ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗ ರವಾನಿಸಿದ್ದಾರೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ