ಮಂಗಳೂರು: ದ.ಕ., ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡುವಂತೆ ಹರೀಶ್ ಪೂಂಜಾ ಆಗ್ರಹ

ಮಂಗಳೂರು: ಈ ಬಾರಿ ಸುರಿದ ಭಾರಿ ಮಳೆಗೆ ಘಟ್ಟಪ್ರದೇಶ ವಿಶೇಷವಾಗಿ ಕರಾವಳಿ ಭಾಗಗಳ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಸರ್ಕಾರ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಶಾಸಕ ಹರೀಶ್ ಪೂಂಜಾ ಸೇರಿ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ವೇಳೆ ಈ ಬಗ್ಗೆ ಮಾತನಾಡಿದ ಹರೀಶ್‌ ಪೂಂಜ ಅವರು, ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು ಸಂದರ್ಭಗಳಲ್ಲಿ ಬೇರೆ ಬೇರೆ ಪ್ರದೇಶಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಲಾಗಿದೆ. ಅದೇ ರೀತಿ ಈ ಬಾರಿಯೂ ಕರಾವಳಿಗೂ ವಿಶೇಷ ಪ್ಯಾಕೇಜ್‌ ಘೋಷಿಸಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಅನಾಹುತ ಸಂಭವಿಸಿದಾಗ ಅಂದಿನ ಬಿಜೆಪಿ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಿತ್ತು ಎಂದು ತಿಳಿಸಿದರು. ಇನ್ನು ಶಾಸಕ ಹರೀಶ್ ಪೂಂಜಾ ಅವರ ಮಾತಿಗೆ ಸುನಿಲ್‌ ಕುಮಾರ್‌, ವಿಪಕ್ಷ ನಾಯಕ ಆರ್ ಅಶೋಕ್ ದನಿಗೂಡಿಸಿದರು.

ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶಾಸಕ ಹರೀಶ್ ಪೂಂಜಾ ಅವರ ಹೇಳಿಕೆಯನ್ನು ಹಂಚಿಕೊಂಡಿರುವ ಬಿಜೆಪಿ, ‘ನಮ್ಮ ಸರ್ಕಾರವಿದ್ದಾಗ ಪ್ರವಾಹ ಸಂಭವಿಸಿದರೆ ಆಯಾ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ನೀಡುತ್ತು. ಮಾನ್ಯ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ವಿಪಕ್ಷದ ಶಾಸಕರಿಗೂ ಅನುದಾನ ನೀಡಿದ್ದರು. ಆದರೆ ಈ ಸರ್ಕಾರದಲ್ಲಿ ವಿಪಕ್ಷವಿರಲಿ, ಆಡಳಿತ ಪಕ್ಷದ ಶಾಸಕರಿಗೂ ಅನುದಾನ ನೀಡುತ್ತಿಲ್ಲ’ ಎಂದು ಪೋಸ್ಟ್ ಮಾಡಿದೆ.

Check Also

ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು

ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತಿ ಭಂಗ …

Leave a Reply

Your email address will not be published. Required fields are marked *

You cannot copy content of this page.